
ಗಣೇಶೋತ್ಸವ ಮೆರವಣಿಗೆಯ ವಿಶೇಷ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಹೆಡ್ ಕಾನ್ಸ್ಟೆಬಲ್ ರಂಗಪ್ಪ ಬಂಡಿವಡ್ಡರ ಅವರ ಬಾಡಿಗೆ ಮನೆಗೆ ಕಳ್ಳರು ಕನ್ನ ಹಾಕಿರುವ ಘಟನೆ ನಡೆದಿದೆ.
ಈಶಾನ್ಯ ಬೆಂಗಳೂರಿನ ಹುಣಸಮಾರನಹಳ್ಳಿ ಸಮೀಪದ ಸುಗ್ಗಟ್ಟ ಗ್ರಾಮದಲ್ಲಿರುವ ಅವರ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು, ಕಪಾಟಿನಲ್ಲಿದ್ದ 35 ಗ್ರಾಂ ಚಿನ್ನಾಭರಣ ಹಾಗೂ 6,000 ರೂಪಾಯಿ ನಗದು ಕಳವು ಮಾಡಿದ್ದಾರೆ.
ಸೆಪ್ಟೆಂಬರ್ 18ರಂದು ಬೆಳಗ್ಗೆ ಮನೆಯನ್ನು ಲಾಕ್ ಮಾಡಿ ಕರ್ತವ್ಯಕ್ಕೆ ತೆರಳಿದ್ದ ಹೆಡ್ ಕಾನ್ಸ್ಟೆಬಲ್ ರಾತ್ರಿ ವಾಪಸ್ ಬಂದಾಗ ಕಳವು ನಡೆದಿರುವುದು ಬೆಳಕಿಗೆ ಬಂದಿದ್ದು, ಚಿಕ್ಕಜಾಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.