
ದೆಹಲಿಯಿಂದ ಲಕ್ನೋಗೆ ತೆರಳುತ್ತಿದ್ದ ಏರ್ ಇಂಡಿಯಾ AI 1717 ವಿಮಾನವು ಹವಾಮಾನ ವೈಪರೀತ್ಯದಿಂದಾಗಿ ಲಕ್ನೋ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ತಾಂತ್ರಿಕ ಸವಾಲು ಎದುರಿಸಿತು.
ಮಧ್ಯಾಹ್ನ 3.45ಕ್ಕೆ ಮೊದಲ ಪ್ರಯತ್ನ ವಿಫಲವಾದ ನಂತರ, ಪೈಲಟ್ ಸಮಯಪ್ರಜ್ಞೆಯಿಂದ ವಿಮಾನವನ್ನು ಆಕಾಶದಲ್ಲಿ ಸುತ್ತು ಹೊಡೆಸಿ ಮಧ್ಯಾಹ್ನ 3.55ಕ್ಕೆ ಸುರಕ್ಷಿತವಾಗಿ ರನ್‌ವೇ ಮೇಲೆ ಇಳಿಸಿದರು.
ರಾಹುಲ್ ಗಾಂಧಿ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ದೃಢಪಡಿಸಿದ್ದಾರೆ.