
ಮೊಹಮ್ಮದ್ ಸಿರಾಜ್ 2023ರಲ್ಲಿ 25 ಪಂದ್ಯಗಳಲ್ಲಿ 44 ವಿಕೆಟ್ ಪಡೆದು ಅದ್ಭುತ ಪ್ರದರ್ಶನ ನೀಡಿದ್ದರೂ, ಆ ಬಳಿಕ ಏಕದಿನ ತಂಡದಲ್ಲಿ ಅವಕಾಶಗಳು ಗಣನೀಯವಾಗಿ ಕಡಿಮೆಯಾಗಿವೆ.
2023ರ ವಿಶ್ವಕಪ್ ಬಳಿಕ ಸೀಮಿತ ಪಂದ್ಯಗಳನ್ನು ಆಡಿರುವ ಸಿರಾಜ್ ಅವರನ್ನು 2025ರ ಚಾಂಪಿಯನ್ಸ್ ಟ್ರೋಫಿ ತಂಡದಿಂದಲೂ ಕೈಬಿಡಲಾಗಿತ್ತು.
ಸಿರಾಜ್ಗೆ ಸಿಗುತ್ತಿರುವ ಸೀಮಿತ ಅವಕಾಶಗಳ ಬಗ್ಗೆ ಮಾಜಿ ಸ್ಪಿನ್ನರ್ ಮುರಳಿ ಕಾರ್ತಿಕ್ ಅಸಮಾಧಾನ ವ್ಯಕ್ತಪಡಿಸಿ ಪ್ರಶ್ನೆ ಎತ್ತಿದ್ದಾರೆ.