
ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗಾಗಿ ಅಲೋಕ್ ಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಪ್ರಕರಣದ ತನಿಖೆಯನ್ನು 100 ದಿನಗಳಲ್ಲಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿರುವ ಕೋರ್ಟ್, ಪ್ರತಿ 30 ದಿನಕ್ಕೊಮ್ಮೆ ಪ್ರಗತಿ ವರದಿ ನೀಡುವಂತೆ ತಿಳಿಸಿದೆ.
ಪರೀಕ್ಷೆಯ ಫಲಿತಾಂಶದ ಬಳಿಕ ಅಭ್ಯರ್ಥಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರತಿ ಹುದ್ದೆಗೆ 70ರಿಂದ 80 ಲಕ್ಷ ರೂ. ಲಂಚ ಕೇಳಿರುವ ಆಡಿಯೋಗಳು ಬಹಿರಂಗಗೊಂಡಿದ್ದವು.