ಕಾವೇರಿ ನೀರು ಸರಬರಾಜು ಯೋಜನೆ 5ನೇ ಹಂತದ ತುರ್ತು ನಿರ್ವಹಣಾ ಕಾಮಗಾರಿಯಿಂದಾಗಿ ಜುಲೈ 31ರಂದು ಬೆಂಗಳೂರಿನ 60ಕ್ಕೂ ಹೆಚ್ಚು ಬಡಾವಣೆಗಳಲ್ಲಿ ನೀರು ಪೂರೈಕೆ ವ್ಯತ್ಯಯವಾಗಲಿದೆ.
ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಒಟ್ಟು 15 ಗಂಟೆಗಳ ಕಾಲ ನೀರು ಪೂರೈಕೆ ಸ್ಥಗಿತಗೊಳ್ಳಲಿದ್ದು, ಸಾರ್ವಜನಿಕರು ಅಗತ್ಯ ನೀರನ್ನು ಶೇಖರಿಸಿಟ್ಟುಕೊಳ್ಳಲು ಬಿಡಬ್ಲ್ಯೂಎಸ್‌ಎಸ್‌ಬಿ ಸೂಚಿಸಿದೆ.
ಉತ್ತರ, ಈಶಾನ್ಯ, ಪೂರ್ವ, ಪಶ್ಚಿಮ ಮತ್ತು ವಾಯುವ್ಯ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಈ ನೀರು ಪೂರೈಕೆ ವ್ಯತ್ಯಯ ಉಂಟಾಗಲಿದೆ ಎಂದು ಜಲಮಂಡಳಿ ತಿಳಿಸಿದೆ.