
ಕರ್ನಾಟಕದಲ್ಲಿ ಸೆಪ್ಟೆಂಬರ್ 23 ಮತ್ತು 24ರಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಸೆಪ್ಟೆಂಬರ್ 24ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕಳೆದ 24 ಗಂಟೆಗಳಲ್ಲಿ ಕಲಬುರಗಿ ಜಿಲ್ಲೆಯ ಯಡ್ರಾಮಿಯಲ್ಲಿ 8 ಸೆಂಟಿಮೀಟರ್ ಭಾರಿ ಮಳೆ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ.