
ರಜನಿಕಾಂತ್ ಅವರ ಅಪ್ಪಟ ಅಭಿಮಾನಿಯಾಗಿರುವ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್, ಅವರ ಹೊಸ ಸಿನಿಮಾ ಜೈಲರ್ 2 ವೀಕ್ಷಿಸಲು ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ್ದಾರೆ.
ದೆಹಲಿಯಲ್ಲಿ ಕಾರ್ಯಕ್ರಮವಿದ್ದ ಕಾರಣ ಬಿಡುಗಡೆಯ ದಿನ ಸಿನಿಮಾ ನೋಡಲು ಸಾಧ್ಯವಾಗದಿದ್ದ ಅವರು, ಪ್ರಸ್ತುತ ಪತ್ನಿ ಮತ್ತು ಸ್ನೇಹಿತರ ಜೊತೆ ಸಿನಿಮಾ ವೀಕ್ಷಿಸಲು ವಿಶೇಷ ವ್ಯವಸ್ಥೆ ಮಾಡಿಕೊಂಡಿದ್ದಾರೆ.
ತಮಿಳು ಭಾಷೆ ಬಲ್ಲ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಕೂಡ ಈ ವಿಶೇಷ ಸಿನಿಮಾ ವೀಕ್ಷಣೆಗೆ ಆಗಮಿಸಲಿದ್ದಾರೆ ಎಂದು ಸಂಜು ಸ್ಯಾಮ್ಸನ್ ತಿಳಿಸಿದ್ದಾರೆ.