
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ 8.43 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರವೀಂದ್ರ ಕುಮಾರ್ನ ಸಹೋದರ ಅನಿಲ್ ಕುಮಾರ್ನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಅನಿಲ್ ಕುಮಾರ್ನ ಬ್ಯಾಂಕ್ ಖಾತೆಗೆ ಐದಕ್ಕೂ ಹೆಚ್ಚು ಕಂತುಗಳಲ್ಲಿ 1 ಕೋಟಿ ರೂ.ಗೂ ಅಧಿಕ ಹಣ ವರ್ಗಾವಣೆಯಾಗಿರುವುದು ತನಿಖೆಯಲ್ಲಿ ಪತ್ತೆಯಾಗಿದ್ದು, ಈತ ಬೆಂಗಳೂರಿನ ಪಿಜಿಯಲ್ಲಿ ತಲೆಮರೆಸಿಕೊಂಡಿದ್ದ.
ಪ್ರಕರಣದ ರೂವಾರಿ ರವೀಂದ್ರ ಕುಮಾರ್ ಸದ್ಯ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ ಮತ್ತು ಬಂಧಿತ ಅನಿಲ್ ಕುಮಾರ್ನನ್ನು ವಿಚಾರಣೆಗೊಳಪಡಿಸಿದ್ದಾರೆ.