ವಿದ್ಯಾರ್ಥಿ ಸಂಘದ ಪುನರಾರಂಭಕ್ಕೆ ಆಗ್ರಹಿಸಿ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ, ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು ಪ್ರಸಕ್ತ ಸೆಮಿಸ್ಟರ್ನ ತರಗತಿಗಳು ಮತ್ತು ಪರೀಕ್ಷೆಗಳನ್ನು ಆನ್ಲೈನ್ನಲ್ಲಿ ನಡೆಸಲು ನಿರ್ಧರಿಸಿದೆ.
ನವೆಂಬರ್ 24ರವರೆಗೆ ಆನ್ಲೈನ್ ತರಗತಿಗಳು ನಡೆಯಲಿದ್ದು, ಡಿಸೆಂಬರ್ 1ರಿಂದ 24ರವರೆಗೆ ಸೆಮಿಸ್ಟರ್ ಅಂತ್ಯದ ಪರೀಕ್ಷೆಗಳು ಹಾಗೂ ಜನವರಿ 13ರಿಂದ ಮುಂದಿನ ಸೆಮಿಸ್ಟರ್ ಆರಂಭವಾಗಲಿದೆ.
ಆಡಳಿತ ಮಂಡಳಿಯ ಈ ನಿರ್ಧಾರವನ್ನು ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿ ಸಂಘ ಹಾಗೂ ಕಾಂಗ್ರೆಸ್ ನಾಯಕ ಪವನ್ ಖೇರಾ ವಿರೋಧಿಸಿದ್ದಾರೆ.