
ಕರ್ನಾಟಕದ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್ಪ್ರೆಸ್ವೇಗಳಲ್ಲಿ ಈ ವರ್ಷ ಒಟ್ಟು ₹4,779 ಕೋಟಿ ಟೋಲ್ ಸಂಗ್ರಹವಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇಶಾದ್ಯಂತ ಟೋಲ್ ಸಂಗ್ರಹವು 2021-22ರಲ್ಲಿ ₹33,928 ಕೋಟಿಯಿಂದ 2025-26ರಲ್ಲಿ ₹70,278 ಕೋಟಿಗೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಹೆದ್ದಾರಿ ಅಭಿವೃದ್ಧಿ ಮತ್ತು ನಿರ್ವಹಣೆಯ ಭಾಗವಾಗಿ ಈ ಟೋಲ್ ಸಂಗ್ರಹವನ್ನು ಮಾಡಲಾಗುತ್ತಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ದೇಶದಾದ್ಯಂತ ಟೋಲ್ ಆದಾಯದಲ್ಲಿ ಭಾರಿ ಹೆಚ್ಚಳ ಕಂಡುಬಂದಿದೆ.