
2005ರ ಒಡಿಶಾದ ತಲಬಿರಾ-II ಕಲ್ಲಿದ್ದಲು ಬ್ಲಾಕ್ ಹಂಚಿಕೆ ಪ್ರಕರಣದಲ್ಲಿ ಮಾಜಿ ಪ್ರಧಾನಿ ದಿವಂಗತ ಡಾ. ಮನಮೋಹನ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿದೆ.
ಸಿಬಿಐ ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು, 2015ರ ವಿಶೇಷ ನ್ಯಾಯಾಲಯದ ಸಮನ್ಸ್ ಆದೇಶವನ್ನು ರದ್ದುಗೊಳಿಸಿ 11 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ ಎಳೆದಿದೆ.
ಸಿಬಿಐ ತನ್ನ ತನಿಖೆಯಲ್ಲಿ ಯಾವುದೇ ಅಪರಾಧ ಸಾಬೀತಾಗಿಲ್ಲ ಎಂದು ವರದಿ ನೀಡಿದ್ದರೂ, ವಿಚಾರಣಾ ನ್ಯಾಯಾಲಯವು ಮನಮೋಹನ್ ಸಿಂಗ್ ಮತ್ತು ಇತರ ಐವರಿಗೆ ಸಮನ್ಸ್ ಜಾರಿಗೊಳಿಸಿತ್ತು, ಇದನ್ನು ಸುಪ್ರೀಂ ಕೋರ್ಟ್ ತಪ್ಪು ಎಂದು ಅಭಿಪ್ರಾಯಪಟ್ಟಿದೆ.