
ಬೆಂಗಳೂರಿನಲ್ಲಿ ಸಿಸಿಬಿ ಹಾಗೂ ಉಪ್ಪಾರಪೇಟೆ ಠಾಣೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು 30 ಲಕ್ಷ ರೂಪಾಯಿ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಐಟಿಸಿ ಕಂಪನಿಯ ಪ್ರತಿನಿಧಿ ಅನ್ವೇಶ್ ಅವರ ದೂರಿನ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ಕೇರಳಕ್ಕೆ ಅಕ್ರಮವಾಗಿ ಸಿಗರೇಟ್ ಸಾಗಿಸುತ್ತಿದ್ದ ಮಹಮದ್ ರಿಯಾಜ್ ಮತ್ತು ಕುಮಾರನ್ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.
ಆರೋಪಿಗಳು ಐಟಿಸಿ ಬ್ರ್ಯಾಂಡ್ ಹೆಸರಿನಲ್ಲಿ ನಕಲಿ ಸಿಗರೇಟ್‌ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದು, ಜಾಲದ ಮೂಲ ಬೇರು ಪತ್ತೆಗೆ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.