
ವಿಶ್ವವಿಖ್ಯಾತ 11 ದಿನಗಳ ಮೈಸೂರು ದಸರಾ ಮಹೋತ್ಸವವು ಬುಧವಾರ ರಾತ್ರಿ ಅಧಿಕೃತವಾಗಿ ಮುಕ್ತಾಯಗೊಂಡಿದೆ.
ಕೊನೆಯ ದಿನವಾದ ಅಕ್ಟೋಬರ್ 21ರಂದು ವೈಭವದ ಜಂಬೂ ಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ.
ಕಾರ್ಯಕ್ರಮದ ಅಂತಿಮಘಟ್ಟವಾಗಿ ಆಗಸದಲ್ಲಿ ನಡೆದ ಆಕರ್ಷಕ ಸಿಡಿಮದ್ದು ಪ್ರದರ್ಶನದೊಂದಿಗೆ ದಸರಾ ಉತ್ಸವಕ್ಕೆ ವರ್ಣರಂಜಿತ ತೆರೆ ಎಳೆಯಲಾಗಿದೆ.