
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನೆಲೆಸಿರುವ ಹಿನ್ನೆಲೆಯಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ನಿಯಮಗಳಡಿ ₹3,70,530 ಕೋಟಿ ನೆರವು ಕೋರಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಸೆಪ್ಟೆಂಬರ್ ವೇಳೆಗೆ ಶೇ 58 ರಷ್ಟು ಮಳೆ ಕೊರತೆಯಾಗಿದ್ದು, ₹18,74,823 ಕೋಟಿ ನಷ್ಟ ಸಂಭವಿಸಿದೆ. ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಪರಿಹಾರ ನೀಡುವುದು ಸೇರಿದಂತೆ ಆರು ಪ್ರಮುಖ ಬೇಡಿಕೆಗಳನ್ನು ಅವರು ಮುಂದಿಟ್ಟಿದ್ದಾರೆ.
ರಾಜ್ಯದ 31 ಲಕ್ಷಕ್ಕೂ ಹೆಚ್ಚು ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ರಾಜಕೀಯ ಭಿನ್ನಾಭಿಪ್ರಾಯ ಬದಿಗೊತ್ತಿ ಮಾನವೀಯತೆಯ ಆಧಾರದ ಮೇಲೆ ತುರ್ತಾಗಿ ಪರಿಹಾರ ಒದಗಿಸುವಂತೆ ಅವರು ಒತ್ತಾಯಿಸಿದ್ದಾರೆ.