
ಹರಿಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಮಹಿಳಾ ಬೈಕರ್‌ಗೆ ಕಾರು ಗುದ್ದಿ ಪರಾರಿಯಾದ ಪ್ರಕರಣದಲ್ಲಿ ಕಾರು ಚಾಲಕ ಕಲ್ಯಾಣ್ ಬೈನ್ಸ್ಲಾ ವಿರುದ್ಧ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಸಿಸಿಟಿವಿ ಮತ್ತು ಆಕ್ಷನ್ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಈ ಎಫ್‌ಐಆರ್ ದಾಖಲಿಸಲಾಗಿದ್ದು, ಈ ಗಂಭೀರ ಸೆಕ್ಷನ್ ಅಡಿಯಲ್ಲಿ ಆರೋಪಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆಯಾಗುವ ಸಾಧ್ಯತೆಯಿದೆ.
ಅಪಘಾತದ ರಭಸಕ್ಕೆ ಬೈಕ್ ರಸ್ತೆಯಲ್ಲಿ ಎಳೆದೊಯ್ದಿದ್ದರೂ, ಸಂತ್ರಸ್ತೆ ಸಿಯಾ ಅವರು ಗುಣಮಟ್ಟದ ರೈಡಿಂಗ್ ಜಾಕೆಟ್ ಮತ್ತು ಹೆಲ್ಮೆಟ್ ಧರಿಸಿದ್ದರಿಂದ ಮಾರಣಾಂತಿಕ ಗಾಯಗಳಿಂದ ಪಾರಾಗಿದ್ದಾರೆ.