
2020ರ ಈಶಾನ್ಯ ದೆಹಲಿ ದಂಗೆಯ ವೇಳೆ ಐಬಿ ಅಧಿಕಾರಿ ಅಂಕಿತ್ ಶರ್ಮಾ ಅವರ ಕೊಲೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಸೇರಿದಂತೆ ಐವರಿಗೆ ದೆಹಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಜುಲೈ 13ರಂದು ಕರ್ಕರ್ಡೂಮಾ ನ್ಯಾಯಾಲಯವು ತಾಹಿರ್ ಹುಸೇನ್, ನಾಜಿಮ್, ಖಾಸಿಮ್, ಜಾವೇದ್ ಮತ್ತು ಅನಾಸ್ ಅವರನ್ನು ಕೊಲೆ ಮತ್ತು ಕ್ರಿಮಿನಲ್ ಸಂಚಿನ ಆರೋಪದಲ್ಲಿ ಅಪರಾಧಿಗಳೆಂದು ಘೋಷಿಸಿತ್ತು.
ಫೆಬ್ರವರಿ 25, 2020ರಂದು ಸಂಜೆ 5 ಗಂಟೆಗೆ ಅಂಕಿತ್ ಶರ್ಮಾ ಅವರನ್ನು ಗುಂಪೊಂದು ಅಪಹರಿಸಿ ಕೊಲೆ ಮಾಡಿದ್ದು, ಮೃತದೇಹವನ್ನು ಚರಂಡಿಯಲ್ಲಿ ಎಸೆದಿದ್ದಾಗಿ ತನಿಖೆಯಲ್ಲಿ ಸಾಬೀತಾಗಿದೆ.