
ಸಚಿವ ಸಂಪುಟ ವಿಸ್ತರಣೆಯ ಬಳಿಕ ಬಾಗೇಪಲ್ಲಿ ಶಾಸಕ ಸುಭಾ ರೆಡ್ಡಿ ತಮಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯ ಬಂದಾಗಿನಿಂದಲೂ ಬಾಗೇಪಲ್ಲಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ನೋವು ತೋಡಿಕೊಂಡಿರುವ ಅವರು, ಪಕ್ಷಕ್ಕೆ ನಿಷ್ಠೆ ತೋರಿದರೂ ಸೂಕ್ತ ಮನ್ನಣೆ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಆಪರೇಷನ್ ಕಮಲದ ಸಂದರ್ಭದಲ್ಲಿ ಬಿಜೆಪಿಗೆ ಹೋಗುವ ಅವಕಾಶವಿದ್ದರೂ ಪಕ್ಷದ ನಿಷ್ಠೆಗಾಗಿ ಉಳಿದುಕೊಂಡಿದ್ದಾಗಿ ತಿಳಿಸಿದ ಅವರು, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.