
ಬಾಗಲಕೋಟೆ ಜಿಲ್ಲೆಯ ಹುನಗುಂದ ಮತ್ತು ಗುಳೇದಗುಡ್ಡ ತಾಲೂಕುಗಳಲ್ಲಿ ಮಳೆಯಿಲ್ಲದೆ ಬೆಳೆ ನಷ್ಟ ಅನುಭವಿಸಿದ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್, ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು.
ರೈತ ನಂದೆಪ್ಪ ಬಾರಕೇರ ಸೇರಿದಂತೆ ಹಲವು ರೈತರ ಅಹವಾಲುಗಳನ್ನು ಆಲಿಸಿದ ಸಿಎಂ, ಸರ್ಕಾರ ರೈತರ ಬೆನ್ನಿಗಿದೆ ಎಂದು ಭರವಸೆ ನೀಡಿ, ಬರ ಪರಿಸ್ಥಿತಿಯ ವೈಮಾನಿಕ ವೀಕ್ಷಣೆಯನ್ನೂ ನಡೆಸಿದರು.
ಆಲಮಟ್ಟಿಯಿಂದ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಕ್ರಮ ಮತ್ತು ಶಿರೂರು ಏತ ನೀರಾವರಿ ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವುದಾಗಿ ಸಿಎಂ ಸ್ಥಳದಲ್ಲೇ ಭರವಸೆ ನೀಡಿದರು.