
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಿದ್ದು, ನವೆಂಬರ್ 20ರಿಂದ ಪರೀಕ್ಷೆಗಳು ನಡೆಯಲಿವೆ.
ನವೆಂಬರ್ 20ರಂದು ಕನ್ನಡ ಭಾಷಾ ಪರೀಕ್ಷೆ, ನವೆಂಬರ್ 21ರಂದು ಸಾಮಾನ್ಯ ಜ್ಞಾನ ಪರೀಕ್ಷೆ ಮತ್ತು ನವೆಂಬರ್ 22ರಿಂದ ವಸತಿ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳು ನಿಗದಿಯಾಗಿವೆ.
ಕನ್ನಡ ಭಾಷಾ ಪರೀಕ್ಷೆಯನ್ನು ಹೊರತುಪಡಿಸಿ ಇತರೆ ಪರೀಕ್ಷೆಗಳಿಗೆ 0.25 ಅಂಕಗಳ ನೆಗೆಟಿವ್ ಮಾರ್ಕಿಂಗ್ ಇರಲಿದ್ದು, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆ ಮುಂಚಿತವಾಗಿ ಹಾಜರಾಗಬೇಕು.