
ಮಂಗಳೂರು ಕೆ.ಆರ್.ಐ.ಡಿ.ಎಲ್ ವಿಭಾಗದ ಇಂಜಿನಿಯರ್ಗಳಾದ ವಿಜಯ್ ಮತ್ತು ಪ್ರಜ್ವಲ್ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಕೇಳಿಬಂದಿದ್ದು, ಶಾಸಕ ಅಶೋಕ್ ಕುಮಾರ್ ರೈ ಸಿಎಂಗೆ ಪತ್ರ ಬರೆದಿದ್ದಾರೆ.
ಗುತ್ತಿಗೆದಾರರಿಗೆ ಕಿರುಕುಳ ನೀಡಿ ಕೆ.ಆರ್.ಐ.ಡಿ.ಎಲ್ ಚಾರ್ಜ್ ಹೆಸರಿನಲ್ಲಿ ಶೇ.7ರಷ್ಟು ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆರೋಪಿಸಲಾಗಿದೆ.
ಈ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ತನಿಖೆ ಪೂರ್ಣಗೊಳ್ಳುವವರೆಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಶಾಸಕರು ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಆಗ್ರಹಿಸಿದ್ದಾರೆ.