
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ತೋಟಗಾರಿಕೆ ಇಲಾಖೆಯ ಉಳಿಕೆ ಮೂಲ ವೃಂದದ ಸಹಾಯಕ ತೋಟಗಾರಿಕೆ ಅಧಿಕಾರಿ ಮತ್ತು ನಿರ್ದೇಶಕರ ಹುದ್ದೆಗಳ ಅಂತಿಮ ಅಂಕಪಟ್ಟಿಯನ್ನು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಕನಿಷ್ಠ 35 ಅಂಕ ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸಿ ಈ ಅಂತಿಮ ಅಂಕಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ತಾತ್ಕಾಲಿಕ ಫಲಿತಾಂಶಕ್ಕೆ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯಿಂದ ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಅಕ್ಟೋಬರ್ 7ರಂದು ಬಿಡುಗಡೆ ಮಾಡಲಾಗಿತ್ತು.