
ಆನೆಗಳು ಬೆಳೆ ನಾಶಪಡಿಸುತ್ತವೆ ಎಂಬ ಕಾರಣ ನೀಡಿ ಆನೆ ಕಾರಿಡಾರ್ಗಳಲ್ಲಿ ತಡೆಗೋಡೆಗಳನ್ನು ನಿರ್ಮಿಸುವುದನ್ನು ಸುಪ್ರೀಂ ಕೋರ್ಟ್ ಸೋಮವಾರ ಕಟ್ಟುನಿಟ್ಟಾಗಿ ನಿಷೇಧಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಆನೆಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಯಾವುದೇ ನಿರ್ಮಾಣಗಳನ್ನು ಮಾಡಬಾರದು ಎಂದು ರಾಜ್ಯಗಳಿಗೆ ಸ್ಪಷ್ಟ ಸೂಚನೆ ನೀಡಿದೆ.
ದೇಶದಾದ್ಯಂತ ಆನೆ ಕಾರಿಡಾರ್ಗಳ ಕುರಿತು ಹೊಸದಾಗಿ ಸಮೀಕ್ಷೆ ನಡೆಸಿ, ಅವುಗಳ ಸಂಚಾರಕ್ಕೆ ಇರುವ ಅಡೆತಡೆಗಳ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಕೇಂದ್ರ ಪರಿಸರ ಸಚಿವಾಲಯಕ್ಕೆ ನ್ಯಾಯಾಲಯ ನಿರ್ದೇಶಿಸಿದೆ.