
ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್, ತಾನು ಅಪ್ರೂವರ್ ಆಗಲು ಸಿದ್ಧವಿರುವುದಾಗಿ 59ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ನಡೆಸಿದ ವಿಚಾರಣೆಯಲ್ಲಿ, ಪ್ರದೋಷ್ ಯಾವುದೇ ಒತ್ತಡವಿಲ್ಲದೆ ಸತ್ಯವನ್ನು ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ.
ಪ್ರದೋಷ್ ಅವರ ಅರ್ಜಿಯ ಕುರಿತು ನ್ಯಾಯಾಲಯವು ಮುಂದಿನ ಸಾಕ್ಷ್ಯ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿದೆ.