
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿರುವ ಕಾರಣ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬರದ ಆತಂಕ ಮುಂದುವರಿದಿದೆ.
ಸೆಪ್ಟೆಂಬರ್ 11 ಹಾಗೂ 12ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಮುಂಗಾರು ಮಳೆ ಕೊರತೆಯ ಪರಿಣಾಮ ರಾಜ್ಯದಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜಲಾಶಯಗಳ ಒಳಹರಿವಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ.