
ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರಲ್ಲಿ ಬಂದೂಕು ಹಸ್ತಾಂತರಿಸಿದ ರಾಧಾ ಮತ್ತು ಬಬಿತಾ ಎಂಬ ಇಬ್ಬರು ಯುವತಿಯರು ಹಾಗೂ ಶಸ್ತ್ರಾಸ್ತ್ರ ಸರಬರಾಜು ಮಾಡಿದ ಸುಮಿತ್ ಮತ್ತು ಕುನಾಲ್ ಸೇರಿದ್ದಾರೆ.
ಆರೋಪಿಗಳು ಎನ್‌ಕ್ರಿಪ್ಟ್ ಮಾಡಿದ ಅಪ್ಲಿಕೇಶನ್ ಮೂಲಕ ಸಂದೇಶಗಳನ್ನು ರವಾನಿಸಿ ಕೃತ್ಯ ಎಸಗಿರುವುದು ತನಿಖೆಯಿಂದ ತಿಳಿದುಬಂದಿದೆ.