
ಬೆಂಗಳೂರಿನ ಯುಆರ್ ರಾವ್ ಸ್ಯಾಟಲೈಟ್ ಸೆಂಟರ್ (URSC) 2026-27ನೇ ಸಾಲಿಗೆ ಪದವೀಧರ, ತಂತ್ರಜ್ಞ ಮತ್ತು ವಾಣಿಜ್ಯ ಅಭ್ಯಾಸ ಅಪ್ರೆಂಟಿಸ್‌ಶಿಪ್‌ಗಾಗಿ 410 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
ಅರ್ಹ ಅಭ್ಯರ್ಥಿಗಳು ಆಗಸ್ಟ್ 28ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು; ಆಯ್ಕೆಯಾದವರಿಗೆ ತಿಂಗಳಿಗೆ 10,900 ರಿಂದ 12,300 ರೂಪಾಯಿ ಸ್ಟೈಫಂಡ್ ನೀಡಲಾಗುತ್ತದೆ.
ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ಶೈಕ್ಷಣಿಕ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುವುದು ಎಂದು ಇಸ್ರೋ ಪ್ರಕಟಣೆಯಲ್ಲಿ ತಿಳಿಸಿದೆ.