
ಎಸ್.ಎಸ್. ರಾಜಮೌಳಿ ನಿರ್ದೇಶನದಲ್ಲಿ ಮಹೇಶ್ ಬಾಬು ನಾಯಕನಾಗಿ ನಟಿಸುತ್ತಿರುವ 'ವಾರಣಾಸಿ' ಸಿನಿಮಾ ಸುಮಾರು 1,300 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ.
ಈ ಬಹುನಿರೀಕ್ಷಿತ ಚಿತ್ರದಲ್ಲಿ ಬ್ರಿಟಿಷ್ ನಟಿ ಡೈಸಿ ಜೆಸ್ಸಿಕಾ ಎಡ್ಗರ್ ಜೋನ್ಸ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ವರದಿಗಳು ಟಾಲಿವುಡ್‌ನಲ್ಲಿ ಹರಿದಾಡುತ್ತಿವೆ.
ಈ ಚಿತ್ರವು ಅಂಟಾರ್ಕ್ಟಿಕಾದಲ್ಲಿ ಚಿತ್ರೀಕರಣ ನಡೆಸಿದ ಮೊದಲ ಭಾರತೀಯ ಸಿನಿಮಾ ಎಂಬ ಐತಿಹಾಸಿಕ ಮೈಲಿಗಲ್ಲು ಸಾಧಿಸಲಿದೆ.