
ಸಾರ್ವಜನಿಕ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರದ ಬೆನ್ನಲ್ಲೇ, ಆರ್‌ಎಸ್‌ಎಸ್ ನೋಂದಣಿ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬಿಜೆಪಿ ನಾಯಕರ ನಡುವೆ ವಾಗ್ವಾದ ನಡೆದಿದೆ.
ಆರ್‌ಎಸ್‌ಎಸ್ ನೋಂದಣಿ ಮಾಡುವ ಅವಶ್ಯಕತೆ ಇಲ್ಲ ಮತ್ತು ಅದು ಹಿಂದೆಂದೂ ನೋಂದಣಿಯಾಗಿರಲಿಲ್ಲ, ಮುಂದೆಯೂ ಆಗುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತಿರುಗೇಟು ನೀಡಿದ್ದಾರೆ.
ರಾಜ್ಯ ಸರ್ಕಾರವು ಹೊಸ ಕಾಯ್ದೆಯ ಮೂಲಕ ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ರಾಜಕೀಯ ಜಟಾಪಟಿ ತೀವ್ರಗೊಂಡಿದೆ.