
ಧಾರವಾಡದ ಆರ್.ಎನ್.ಶೆಟ್ಟಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನ ಪುರುಷರ ಸಿಂಗಲ್ಸ್ನಲ್ಲಿ ಹೇಮಂತ್ ಗೌಡ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಗುರುವಾರ ನಡೆದ 32ರ ಘಟ್ಟದ ಪಂದ್ಯದಲ್ಲಿ ಐದನೇ ಶ್ರೇಯಾಂಕದ ಆಟಗಾರ ಹೇಮಂತ್ ಗೌಡ ಅವರು 15-8, 15-7ರ ನೇರ ಸೆಟ್ಗಳಿಂದ ಪ್ರಣವ್ ವಿರುದ್ಧ ಸುಲಭ ಜಯ ಸಾಧಿಸಿದರು.
ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಮೇಘಶ್ರೀ ಅವರು ಸಮೀಕ್ಷಾ ವಿರುದ್ಧ 7-15, 15-9, 15-11 ರಿಂದ ಹಾಗೂ ನಾಲ್ಕನೇ ಶ್ರೇಯಾಂಕದ ಶೈನಾ ಅವರು ನೀತಿ ವಿರುದ್ಧ 15-9, 15-9 ರಿಂದ ಗೆದ್ದು 16ರ ಘಟ್ಟಕ್ಕೆ ಮುನ್ನಡೆದಿದ್ದಾರೆ.