
ಬಿಗ್ ಬಾಸ್ ವಿಜೇತ ಶೈನ್ ಶೆಟ್ಟಿ ನಟಿಸಿ, ಕಥೆ ಬರೆದು ನಿರ್ಮಿಸಿರುವ 'ಶಂಕರಾಭರಣ' ಸಿನಿಮಾ ನವೆಂಬರ್ 20ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಸುಮಂತ್ ಭಟ್ ನಿರ್ದೇಶನದ ಈ ಹಾರರ್ ಕಾಮಿಡಿ ಚಿತ್ರದಲ್ಲಿ ಶೈನ್ ಶೆಟ್ಟಿ ಬಸ್ ಚಾಲಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತನ್ವಿ ರಾವ್ ನಾಯಕಿಯಾಗಿ ನಟಿಸಿದ್ದಾರೆ.
ರಂಗಸ್ಥಳ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಿದ್ದು, ಟೀಸರ್ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.