
ಉದ್ಯೋಗಕ್ಕಾಗಿ ಅಲೆಯುವ ಬದಲು ಆಟೋರಿಕ್ಷಾ ಅಥವಾ ಟ್ಯಾಕ್ಸಿ ಓಡಿಸುವಂತೆ ನಿರುದ್ಯೋಗಿ ಯುವಜನರಿಗೆ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಸಲಹೆ ನೀಡಿದ್ದಾರೆ.
ಯುವಕರು ಉತ್ತಮ ಆದಾಯ ಗಳಿಸಿ ಕುಟುಂಬದ ಜತೆಗೆ ಸಮಯ ಕಳೆಯಬಹುದು ಎಂದು ಅವರು ಸೋಮವಾರ ಕಾರ್ಯಕ್ರಮವೊಂದರಲ್ಲಿ ಹೇಳಿದ್ದು, ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಯುವ ಜನರ ಭವಿಷ್ಯವನ್ನು ಅಪಹಾಸ್ಯ ಮಾಡಬೇಡಿ ಎಂದು ರಾಜಕೀಯ ಪಕ್ಷಗಳ ನಾಯಕರು ಹಾಗೂ ನೆಟ್ಟಿಗರು ಸಚಿವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.