
ಯುಎಇನಲ್ಲಿ ಉದ್ಯೋಗದಲ್ಲಿದ್ದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಪ್ರಕಾಶ್ ಕುಂದರ್ ಶಾರ್ಜಾದಲ್ಲಿ ಅಮಾನುಷವಾಗಿ ಹತ್ಯೆಯಾಗಿದ್ದಾರೆ.
ದುಷ್ಕರ್ಮಿಗಳು ಪ್ರಕಾಶ್ ಅವರ ದೇಹವನ್ನು ಒಂಬತ್ತು ತುಂಡುಗಳಾಗಿ ಕತ್ತರಿಸಿ ಕಾರಿನ ಡಿಕ್ಕಿಯಲ್ಲಿ ಇರಿಸಿದ್ದು, ಮೂರು ತಿಂಗಳ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.
ಘಟನೆ ನಡೆದ ಬೆನ್ನಲ್ಲೇ ಮೃತರ ಪತ್ನಿ ಹಾಗೂ ಪುತ್ರ ನಾಪತ್ತೆಯಾಗಿದ್ದು, ಪತ್ನಿಯೇ ಬೇರೊಬ್ಬರ ಸಹಾಯದಿಂದ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.