
ತನ್ನ ಐದು ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ನಡೆಸಿದ ದಾಳಿಗೆ ಪ್ರತೀಕಾರವಾಗಿ, ಪಶ್ಚಿಮ ಏಷ್ಯಾದಲ್ಲಿರುವ ಅಮೆರಿಕದ ನೆಲೆಗಳು ಮತ್ತು ಹಡಗುಗಳನ್ನು ಗುರಿಯಾಗಿಸಿ ದಾಳಿ ಮಾಡಿರುವುದಾಗಿ ಇರಾನ್ ಬುಧವಾರ ಘೋಷಿಸಿದೆ.
ಹೊರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 20 ಹಡಗುಗಳ ಮೇಲೆ ದಾಳಿ ನಡೆಸಿದ್ದಲ್ಲದೆ, ಜೋರ್ಡಾನ್‌ನಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ 18 ಕ್ಷಿಪಣಿಗಳನ್ನು ಹಾರಿಸಿರುವುದಾಗಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕೋರ್ ತಿಳಿಸಿದೆ.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಇರಾನ್ ಅನ್ನು ಎಚ್ಚರಿಸಿದ್ದು, ಇರಾನ್‌ನ ತೈಲ ಟ್ಯಾಂಕರ್‌ಗಳನ್ನು ಅಮೆರಿಕ ಗುರಿಯಾಗಿಸಿದರೆ ಈ ಪ್ರದೇಶದ ಅಮೆರಿಕ ನೆಲೆಗಳನ್ನು ಧ್ವಂಸಗೊಳಿಸುವುದಾಗಿ ಇರಾನ್ ಸೇನೆ ಪುನರುಚ್ಚರಿಸಿದೆ.