
ಪಶ್ಚಿಮ ಏಷ್ಯಾ ಸಂಘರ್ಷವನ್ನು ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರನ್ನು ಒತ್ತಾಯಿಸಿದ್ದಾರೆ.
ಹೋರ್ಮುಜ್‌ನಲ್ಲಿ ನೌಕಾಯಾನ ಮತ್ತು ವಾಣಿಜ್ಯ ಚಟುವಟಿಕೆಗಳ ಸ್ವಾತಂತ್ರ್ಯವನ್ನು ರಕ್ಷಿಸುವುದು ಹಾಗೂ ನಾವಿಕರ ಸುರಕ್ಷತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನದ ಅಗತ್ಯವಿದೆ ಎಂದು ಮೋದಿ ತಿಳಿಸಿದ್ದಾರೆ.
ಎರಡು ವಾರಗಳ ಅಂತರದಲ್ಲಿ ಉಭಯ ನಾಯಕರ ಇದು ಎರಡನೇ ಭೇಟಿಯಾಗಿದ್ದು, ಅಮೆರಿಕ ಹೊಸ ದಂಡನಾತ್ಮಕ ಆರ್ಥಿಕ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.