
ಕಾವೇರಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಸಿಎಂ ವಿಜಯ್ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪತ್ರ ಬರೆದಿದ್ದಾರೆ.
ಕಾವೇರಿ ನದಿಯು ರಾಜ್ಯಗಳನ್ನು ವಿಭಜಿಸುವ ಬದಲು ಬೆಸೆಯುವ ಕೊಂಡಿಯಾಗಬೇಕು ಎಂದು ಮನವಿ ಮಾಡಿರುವ ವಿಜಯೇಂದ್ರ, ಮೇಕೆದಾಟು ಯೋಜನೆಗೆ ಬೆಂಬಲ ನೀಡುವಂತೆ ಕೋರಿದ್ದಾರೆ.
ಬೆಂಗಳೂರಿನ ಕುಡಿಯುವ ನೀರಿನ ಅಗತ್ಯ ಪೂರೈಸಲು ಮೇಕೆದಾಟು ಯೋಜನೆ ಅತ್ಯಗತ್ಯವಾಗಿದ್ದು, ಇದು ತಮಿಳುನಾಡಿನ ನೀರಿನ ಪಾಲಿಗೆ ಯಾವುದೇ ಧಕ್ಕೆ ತರುವುದಿಲ್ಲ ಎಂದು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.