
ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮದ ಮೊದಲ ದಿನವೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬರೋಬ್ಬರಿ 1,84,628 ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.
ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತ್ಯಧಿಕ ಅಂದರೆ 1,20,079 ಮೂರ್ತಿಗಳು ವಿಸರ್ಜನೆಗೊಂಡಿದ್ದು, ಸೆಂಟ್ರಲ್ ವಲಯದಲ್ಲಿ 28,860 ಮೂರ್ತಿಗಳನ್ನು ವಿಸರ್ಜಿಸಲಾಗಿದೆ.
ಪರಿಸರ ರಕ್ಷಣೆಗಾಗಿ 42 ಪ್ರಮುಖ ಕೆರೆಗಳ ಬಳಿ ತಾತ್ಕಾಲಿಕ ಕಲ್ಯಾಣಿಗಳು ಹಾಗೂ ವಾರ್ಡ್ ಮಟ್ಟದಲ್ಲಿ 659 ಸಂಚಾರಿ ಟ್ಯಾಂಕರ್ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.