
ಬೆಂಗಳೂರಿನಿಂದ ಪ್ರತಿದಿನ 1,100 ರಿಂದ 1,147 ಎಂಎಲ್‌ಡಿ ಸಂಸ್ಕರಿಸದ ತ್ಯಾಜ್ಯ ನೀರು ಕಾವೇರಿ ನದಿಗೆ ಸೇರುತ್ತಿರುವುದನ್ನು ತಡೆಯಲು ಸರ್ಕಾರ ಕ್ರಮ ಕೈಗೊಂಡಿದೆ.
ನಿಯಮ ಉಲ್ಲಂಘಿಸಿ ತ್ಯಾಜ್ಯವನ್ನು ನೇರವಾಗಿ ನದಿಗೆ ಬಿಡುವ ಬಣ್ಣದ ಕಾರ್ಖಾನೆಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದಾಗಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡು ಸರ್ಕಾರವು ಈ ಕುರಿತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ದೂರು ನೀಡಿದ್ದು, ನದಿ ಮೂಲಗಳ ರಕ್ಷಣೆಗಾಗಿ ಶೀಘ್ರವೇ ಪ್ರತ್ಯೇಕ ಸಭೆ ನಡೆಸಲಾಗುವುದು.