
ಚಿತ್ರದುರ್ಗದಲ್ಲಿ ಸ್ನೇಹಿತೆಯ ಹುಟ್ಟುಹಬ್ಬದ ಪಾರ್ಟಿಗೆ ಹೋಗೋಣ ಎಂದು ನಂಬಿಸಿ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ತಂದೆಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದೆ.
2025ರಲ್ಲಿ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ, ಸಿಪಿಐ ನಯೂಮ್ ಅವರು ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಗಂಗಾಧರ್ ಚನ್ನಬಸಪ್ಪ ಹಡಪದ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಈ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.