
ಹಾಸನದಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮಂಜೂರಾದರೆ ಅಗತ್ಯವಿರುವ ಭೂಮಿಯನ್ನು ತಿಂಗಳೊಳಗೆ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೈಗಾರಿಕಾ ಪ್ರದೇಶದ ಅಭಿವೃದ್ಧಿಯಲ್ಲಿ ವಿಳಂಬ ಮಾಡುತ್ತಿರುವ ಕೆಐಎಡಿಬಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಜಮೀನು ಕಳೆದುಕೊಂಡು ಪರಿಹಾರಕ್ಕಾಗಿ ಕಾಯುತ್ತಿರುವ ರೈತರಿಗೆ ಬಾಕಿ ಇರುವ ಪರಿಹಾರವನ್ನು ಶೀಘ್ರವಾಗಿ ವಿತರಿಸುವಂತೆ ಅವರು ಸೂಚಿಸಿದ್ದಾರೆ.