
ಟಾಮ್ ಟಾಮ್ ವರದಿಯ ಪ್ರಕಾರ, ಬೆಂಗಳೂರು ವಿಶ್ವದಲ್ಲೇ ಅತಿ ಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, 10 ಕಿಮೀ ಸಂಚರಿಸಲು 35.18 ನಿಮಿಷ ಬೇಕಾಗುತ್ತದೆ.
ನಗರದಲ್ಲಿ ಈಗಾಗಲೇ ಒಂದೂವರೆ ಕೋಟಿ ವಾಹನಗಳಿದ್ದು, ಪ್ರತಿದಿನ ಸುಮಾರು 3 ಸಾವಿರ ಹೊಸ ವಾಹನಗಳು ರಸ್ತೆಗಿಳಿಯುತ್ತಿರುವುದು ಟ್ರಾಫಿಕ್ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ.
ಸಂಚಾರ ದಟ್ಟಣೆ ನಿಯಂತ್ರಿಸಲು ಬೆಂಗಳೂರು ನಗರಾಭಿವೃದ್ಧಿ ಸಚಿವರು ಫುಟ್‌ಪಾತ್ ತೆರವು ಮತ್ತು ಅನಾಥ ವಾಹನಗಳ ಹರಾಜು ಪ್ರಕ್ರಿಯೆಯನ್ನು ಕೈಗೊಂಡಿದ್ದಾರೆ.