
ಪಂಜಾಬ್‌ನ ಫಾಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಹೊರಗಿನವರಿಂದ ಅತ್ಯಾಚಾರ ನಡೆದಿದೆ ಎಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾನುವಾರ ಬೆಳಗಿನ ಜಾವ ಪ್ರತಿಭಟನೆ ನಡೆಸಿ ಆವರಣದಲ್ಲಿ ವಿಧ್ವಂಸಕ ಕೃತ್ಯ ಎಸಗಿದರು.
ಪ್ರತಿಭಟನಾಕಾರರು ವಿಶ್ವವಿದ್ಯಾಲಯದ ಮುಖ್ಯ ದ್ವಾರ ಮುರಿದು ಜಲಂಧರ್-ಫಾಗ್ವಾರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಣಿ ಕುಳಿತಿದ್ದರಿಂದ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.
ಘಟನಾ ಸ್ಥಳಕ್ಕೆ ಧಾವಿಸಿದ ಕಪುರ್ತಲಾ ಎಸ್‌ಎಸ್‌ಪಿ ಗೌರವ್ ತೂರ್ ಯಾವುದೇ ಅತ್ಯಾಚಾರ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದು, ವದಂತಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಸೆಲ್ ತನಿಖೆ ಆರಂಭಿಸಿದೆ.