
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮಾನ್ಯತೆ ಪಡೆದ ಹೈ-ಸ್ಪೀಡ್ ಹಾಂಗ್ ಕಾಂಗ್ ಸಿಕ್ಸಸ್ ಕ್ರಿಕೆಟ್ ಪೂರ್ನಿಯು ಅಕ್ಟೋಬರ್ 30ರಿಂದ ನವೆಂಬರ್ 1ರವರೆಗೆ ನಡೆಯಲಿದೆ.
6 ಓವರ್‌ಗಳು ಮತ್ತು ಪ್ರತಿ ತಂಡದಲ್ಲಿ 6 ಆಟಗಾರರನ್ನು ಹೊಂದಿರುವ ಈ ಟೂರ್ನಿಯಲ್ಲಿ ಭಾರತ ಸೇರಿದಂತೆ ಒಟ್ಟು 12 ತಂಡಗಳು ಪಾಲ್ಗೊಳ್ಳುತ್ತಿವೆ.
ಕಳೆದ ಬಾರಿಯ ಫೈನಲ್‌ನಲ್ಲಿ ಕುವೈತ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿದ್ದ ಪಾಕಿಸ್ತಾನ ಈ ಬಾರಿಯೂ ಡಿಫೆಂಡಿಂಗ್ ಚಾಂಪಿಯನ್ ಆಗಿ ಕಣಕ್ಕಿಳಿಯಲಿದೆ.