
ಮಂಗಳೂರಿನ ಸಿಟಿ ಸೆಂಟರ್ ಮಾಲ್ನಲ್ಲಿರುವ ಕೆಎಫ್ಸಿ ಔಟ್ಲೆಟ್ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ ನಡೆಸಿ ಮಳಿಗೆಯನ್ನು ಬಂದ್ ಮಾಡಿಸಿದೆ.
ಪರಿಶೀಲನೆ ವೇಳೆ 4 ರಿಂದ 8 ತಿಂಗಳ ಹಳೇ ಮಾಂಸ ಮತ್ತು 3 ದಿನಗಳಿಂದ ಬಳಸುತ್ತಿದ್ದ ಕಪ್ಪು ಬಣ್ಣದ ಎಣ್ಣೆ ಅಧಿಕಾರಿಗಳಿಗೆ ಪತ್ತೆಯಾಗಿದೆ.
ಸಂಗ್ರಹಿಸಲಾದ ಮಾಂಸ ಮತ್ತು ಎಣ್ಣೆಯ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಮೈಸೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.