
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಜೆಡಿಎಸ್ ಸಾಮಾಜಿಕ ಜಾಲತಾಣ ಕಾರ್ಯಕರ್ತ ಶಂಕರ್ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.
ಯಾವುದೇ ಪ್ರಕರಣ ದಾಖಲಿಸದೆ ತಮ್ಮ ಪಕ್ಷದ ಕಾರ್ಯಕರ್ತನನ್ನು ವಶಕ್ಕೆ ಪಡೆದಿರುವುದಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಮಾಯಕರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡುತ್ತಿದ್ದು, ಇದನ್ನು ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸಲು ಸಿದ್ಧರಿದ್ದೇವೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.