
ಚಿಕ್ಕಮಗಳೂರಿನ ಕಳಸದ ಹೋಟೆಲ್ನಲ್ಲಿ ವಡೆಯಲ್ಲಿ ಸತ್ತ ಹಲ್ಲಿ ಪತ್ತೆಯಾಗಿದ್ದು, ನಗರದ ಬೇಕರಿಯೊಂದರಲ್ಲಿ ಅವಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ತಯಾರಿಸುತ್ತಿರುವುದು ಬೆಳಕಿಗೆ ಬಂದಿದೆ.
ಕೇಕ್ ಸೇವಿಸಿದ ಗ್ರಾಹಕರು ಅದು ಕಹಿಯಾಗಿ ಕೊಳೆತ ವಾಸನೆ ಬರುತ್ತಿದ್ದರಿಂದ ಬೇಕರಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಇಂತಹ ಹೋಟೆಲ್ ಮತ್ತು ಬೇಕರಿಗಳ ಲೈಸೆನ್ಸ್ ರದ್ದುಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.