
ಪೊಲೀಸ್ ಠಾಣೆಯ ಪೋಸ್ಟಿಂಗ್ಗಾಗಿ ಲಕ್ಷಾಂತರ ರೂಪಾಯಿ ಡೀಲ್ ಕುರಿತು ಮಾತನಾಡಿದ ಆಡಿಯೋ ವೈರಲ್ ಆದ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಮೂವರು ಪಿಎಸ್ಐಗಳನ್ನು ಅಮಾನತುಗೊಳಿಸಲಾಗಿದೆ.
ಎಸ್ಪಿ ದೀಪನ್ ಎಂ.ಎನ್ ಆದೇಶದಂತೆ ಪಿಎಸ್ಐಗಳಾದ ಕಿರಣ್ ಪಾಟೀಲ್, ಕೃಷ್ಣ ಅರಿಕೆರೆ ಮತ್ತು ವಿನೋದ್ ರೆಡ್ಡಿ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಲಾಗಿದೆ.
ಜೆಡಿಎಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಆಡಿಯೋ ಹಂಚಿಕೊಂಡಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯ ಪೊಲೀಸ್ ಪೋಸ್ಟಿಂಗ್ ವ್ಯವಸ್ಥೆಯನ್ನು ಪ್ರಶ್ನಿಸಿದೆ.