
ಸೆಪ್ಟೆಂಬರ್ 10ಕ್ಕೆ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದಾರೆ.
ಎಐಸಿಸಿ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸಲು ಹೈಕಮಾಂಡ್ ಬುಲಾವ್ ನೀಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ದೆಹಲಿಗೆ ಪ್ರಯಾಣಿಸುವ ಸಾಧ್ಯತೆಯಿದೆ.
ದೆಹಲಿ ಭೇಟಿಯ ವೇಳೆ ರಾಜ್ಯ ಸಂಪುಟದಲ್ಲಿ ಖಾಲಿ ಇರುವ ಎರಡ್ಮೂರು ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ.