
ತುಮಕೂರು ಜಿಲ್ಲೆಯ ಪಾವಗಡದ ಟಿ.ಎನ್.ಪೇಟೆ ಗ್ರಾಮದಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಗೆ ಬೃಹತ್ ಮರ ಧರೆಗುರುಳಿದೆ.
ಮರ ಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿ ವಾಹನ ಸವಾರರು ಪರದಾಡಬೇಕಾಯಿತು.
ಘಟನಾ ಸ್ಥಳಕ್ಕೆ ತೆರಳಿದ ಅರಣ್ಯ ಇಲಾಖೆ ಅಧಿಕಾರಿಗಳು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.