
ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮವನ್ನು 'ಪ್ರಧಾನಮಂತ್ರಿ ಸಾಮಾಜಿಕ ಸಹಾಯ ಯೋಜನೆ' ಎಂದು ಮರುನಾಮಕರಣ ಮಾಡಿ, 2026-27ರಿಂದ 2030-31ರವರೆಗೆ ಐದು ವರ್ಷಗಳ ಅವಧಿಗೆ ₹53,428 ಕೋಟಿ ವೆಚ್ಚದಲ್ಲಿ ಮುಂದುವರಿಸಲು ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.
ಈ ಯೋಜನೆಯು ದೇಶದ ಸುಮಾರು 3.20 ಕೋಟಿ ವೃದ್ಧರು, ವಿಧವೆಯರು ಹಾಗೂ ದಿವ್ಯಾಂಗ ಫಲಾನುಭವಿಗಳಿಗೆ ಸಾಮಾಜಿಕ ಭದ್ರತೆ ಒದಗಿಸಲಿದೆ ಎಂದು ತಿಳಿಸಲಾಗಿದೆ.
ಆದರೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಆಡಳಿತ ವೈಫಲ್ಯದಿಂದಾಗಿ ಸುಮಾರು 18 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಹಲವು ತಿಂಗಳಿಂದ ಪಿಂಚಣಿ ಸಿಗದೆ ಸಂಕಷ್ಟ ಎದುರಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.