
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದಲ್ಲಿ ತೊಗರಿ ಬೆಳೆಯ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಶಿವಶಂಕರ್ ಜೀರ್ ಎಂಬ ರೈತನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಿಗ್ಗೆ ದಾಳಿ ನಡೆಸಿದ ಪೊಲೀಸರು ಜಮೀನಿನಲ್ಲಿದ್ದ 500ಕ್ಕೂ ಹೆಚ್ಚು ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದು, ಇದರ ಮೌಲ್ಯ ಅಂದಾಜು 1 ಕೋಟಿ 1 ಲಕ್ಷ 37 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ.
ಜಿಲ್ಲೆಯಲ್ಲಿ ಈ ವರ್ಷ ಒಟ್ಟು 57 ಪ್ರಕರಣಗಳಲ್ಲಿ 65 ಆರೋಪಿಗಳನ್ನು ಬಂಧಿಸಿ 342.183 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.